VIDEO| ಧಗಧಗನೆ ಹೊತ್ತಿ ಉರಿದ ದಾವಣಗೆರೆ ಬೆಣ್ಣೆದೋಸೆ ಹೋಟೆಲ್​!

hotel fire
Published on

ಬೆಂಗಳೂರು: ಬವನಗುಡಿಯ ನೆಟ್ಕಲ್ಲಪ್ಪ ಸರ್ಕಲ್​ನಲ್ಲಿ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್​ ಬೆಂಕಿಗೆ ಆಹುತಿಯಾಗಿದೆ. ​

ಸೋಮವಾರ ಬೆಳಗ್ಗೆ ಸಂಭವಿಸಿದ ಅಗ್ನಿ ದುರಂತದಲ್ಲಿ ಹೋಟೆಲ್​ ಸಂಪೂರ್ಣ ಸುಟ್ಟುಕರಕಲಾಗಿದ್ದು, ಕಟ್ಟಡಕ್ಕೂ ಹಾನಿಯಾಗಿದೆ.

ಬೆಳಗ್ಗೆ 9 ಗಂಟೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಟಾರ್ಪಲಿನ್‌ಗೆ ಬೆಂಕಿ ತಗುಲಿತ್ತು. ಹೋಟೆಲ್ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದರಾದರೂ ಸಾಧ್ಯವಾಗಿಲ್ಲ. ಹೋಟೆಲ್‌ನಲ್ಲಿದ್ದವರೆಲ್ಲ ಕೂಡಲೇ ಹೊರಗೆ ಓಡಿ ಬಂದಿದ್ದಾರೆ. ಬಳಿಕ ಇಡೀ ಹೋಟೆಲ್‌ಗೆ ಬೆಂಕಿ ಆವರಿಸಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ.

ಮಾಹಿತಿ ತಿಳಿಯುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿ‌ ನಂದಿಸಿದೆ. ಈ ಕುರಿತು ಪ್ರಕರಣ ದಾಖಲಾಗಿಲ್ಲ ಎಂದು ಬಸವನಗುಡಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net