

ರಾಯಚೂರು ನಗರದ ಹೊರವಲಯದ ಯರಮರಸ್ ಬಳಿಯ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ (ವೈಟಿಪಿಎಸ್) ನ ಘಟಕದಲ್ಲಿ ಮಂಗಳವಾರ ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದೆ
ಹೊತ್ತಿ ಉರಿದ ಬೆಂಕಿಯಿಂದ ಆತಂಕಗೊಂಡ ಅಧಿಕಾರಿಗಳು ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ವೈಟಿಪಿಎಸ್ ಘಟಕದ ಕಲ್ಲಿದ್ದಲು ಸಾಗಣೆ ಬೆಲ್ಟ್ -ಕೋಲ್ ಕನ್ವೆಯರ್ ಬೆಲ್ಟ್ ಕಿತ್ತಿರುವುದರಿಂದ ಬೆಂಕಿ ಕಾಣಿಸಿಕೊಳ್ಳಲಾಗಿದೆಂದು ಹೇಳಲಾಗುತ್ತದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯವಾಗಿಲ್ಲವೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.