

ಕಾರವಾರ: ಭಾರತೀಯ ನೌಕಾಸೇನೆಯ ಯುದ್ಧ ವಿಮಾನ ವಾಹಕ ನೌಕೆ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಸೇಲರ್ಗಳು ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ. ನೌಕೆಗೂ ಗಂಭೀರ ಹಾನಿ ಸಂಭವಿಸಿಲ್ಲ ಎಂದು ನೌಕಾಸೇನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಅಜಯ ಕಪೂರ್ 'ವಿಜಯವಾಣಿ'ಗೆ ತಿಳಿಸಿದ್ದಾರೆ.
ಎರಡನೇ ಬಾರಿ: ವಿಕ್ರಮಾದಿತ್ಯ ನೌಕೆಯಲ್ಲಿ ಅಗ್ನಿ ಅವಘಡ ಸಂಭವಿಸುತ್ತಿರುವುದು ಇದೇ ಮೊದಲಲ್ಲ. 2019 ರ ಏಪ್ರೀಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆಗ ಒಬ್ಬ ಅಧಿಕಾರಿ ಮೃತಪಟ್ಟಿದ್ದರು.