ಸೋಮವಾರಪೇಟೆ: ಸಮೀಪದ ಶಾಂತಳ್ಳಿ-ಬೆಟ್ಟದಳ್ಳಿ ಶ್ರೀಕುಮಾರಲಿಂಗೇಶ್ವರ ಶಾಲಾ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶಾಲೆಯ ಬೇಲಿ ಹಾಗೂ ಮುಂಭಾಗದ ಆವರಣದಲ್ಲಿದ್ದ ಗಿಡಗಳು ಬೆಂಕಿಗಾಹುತಿಯಾಗಿವೆ. ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಗಾಳಿಯ ರಭಸಕ್ಕೆ ಸುತ್ತಮುತ್ತಲ ಪ್ರದೇಶಕ್ಕೆ ಆವರಿಸುತ್ತಿದ್ದ ಸಂದರ್ಭ ಸ್ಥಳೀಯರು ಹಾಗೂ ಶಾಲಾ ಶಿಕ್ಷಕರು ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿದ್ದಾರೆ.
ಮಕ್ಕಳು ಶಾಲೆ ಬಿಡುವ ಸಮಯದಲ್ಲಿಯೇ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗ್ರಾ.ಪಂ.ಸಿಬ್ಬಂದಿಗಳು ಹಾಗೂ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ನಂದಿಸಲಾಯಿತು.