ಉಳಪನಕಟ್ಟೆ ಬಳಿ ಮೀಸಲು ಅರಣ್ಯಕ್ಕೆ ಬೆಂಕಿ

19 myk 3
Published on

ಮಾಯಕೊಂಡ: ದಾವಣಗೆರೆ ತಾಲೂಕು ಆನಗೋಡು ಹೋಬಳಿ ಉಳಪನಕಟ್ಟೆ ಗ್ರಾಮಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 4ರ ಸಮೀಪದ ಮೀಸಲು ಅರಣ್ಯಕ್ಕೆ ಮಂಗಳವಾರ ಮಧ್ಯಾಹ್ನ ಬೆಂಕಿ ಬಿದ್ದು ಹಲವು ಗಂಟೆಗಳ ಕಾಲ ಧಗಧಗಿಸಿದೆ.

ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸ್ಥಳೀಯ ನಾಗರಿಕರು ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ತಿಳಿಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಅಗ್ನಿಶಾಮಕದಳ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net