ಏಕಾಏಕಿ ಹೊತ್ತಿ ಉರಿಯಿತು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರ ಕಾರು!

Car
Published on

ರಾಯಚೂರು: ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿದೆ.

ಇದು ಬೆಂಗಳೂರಿನ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಡಾ.ವಿಜಯಾನಂದ ಸ್ವಾಮಿ ಎನ್ನುವವರಿಗೆ ಸೇರಿದ ಕಾರು ಎಂದು ತಿಳಿದುಬಂದಿದೆ. ರಾಯಚೂರು ನಗರದ ವಾರ್ಡ್ ನಂ 22ರ ಬಡಾವಣೆಯ ಮಡ್ಡಿಪೇಟೆಯಲ್ಲಿ ಶನಿವಾರ ನಸುಕಿನ ಜಾವ ಈ ಘಟನೆ ನಡೆದಿದೆ.

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆಯುವುದಕ್ಕಾಗಿ, ನಿನ್ನೆ ಸಂಜೆ ಬೆಂಗಳೂರಿನಿಂದ ರಾಯಚೂರಿಗೆ ಆಗಮಿಸಿದ್ದ ವಿಜಯಾನಂದಸ್ವಾಮಿ ಅವರು, ರಸ್ತೆ ಪಕ್ಕದಲ್ಲಿ ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net