ಅಡುಗೆ ಅನಿಲ ಸಿಲಿಂಡರ್ ರೆಗ್ಯುಲೇಟರ್ ನಲ್ಲಿ ಬೆಂಕಿ, ತಪ್ಪಿದ ಭಾರಿ ಅನಾಹುತ

4-1.jpg
Published on


ಚಿಕ್ಕಬಳ್ಳಾಪುರ: ಅಡುಗೆ ಅನಿಲ ಸಿಲಿಂಡರ್ ಬಳಕೆಯ ಸಂದರ್ಭದಲ್ಲಿ ಸುರಕ್ಷತೆಯ ಕ್ರಮಗಳ ಬಗ್ಗೆ ನಿರಂತರವಾಗಿ ಅರಿವು ಮೂಡಿಸಲಾಗುತ್ತಿದೆ. ಇದರ ನಡುವೆಯೂ ಅವಘಡಗಳು ಸಂಭವಿಸುತ್ತಿವೆ. ಇಲ್ಲಿ ಅದೃಷ್ಟವಶಾತ್ ಅಗ್ನಿಶಾಮಕ ದಳ ಸಿಬ್ಬಂದಿ ಸಕಾಲ ಆಗಮನದಿಂದ ಅನಾಹುತವೊಂದು ತಪ್ಪಿದೆ. 
ಚಿಂತಾಮಣಿ ತಾಲ್ಲೂಕಿನ   ಕೊಡದವಾಡಿಯಲ್ಲಿ ರೆಗ್ಯುಲೇಟರ್ ಬಳಿ ಅನಿಲ ಸಿಲಿಂಡರ್ ಸೋರಿಕೆಯಾಗಿದೆ. ಹಾಗೆಯೇ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಇದರ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬಂದು ಬೆಂಕಿಯನ್ನು ನಂದಿಸುವ ಮೂಲಕ ಆಗಬಹುದಾದ ದೊಡ್ಡ ಹಾನಿಯನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದೆ.
ಕೊಡದವಾಡಿ ಗ್ರಾಮದ ಲಕ್ಷ್ಮಣರೆಡ್ಡಿಯ ಮನೆಯಲ್ಲಿಯೇ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಾಗಿದ್ದು ಇದರಿಂದ ಬೆಂಕಿ ಕಾಣಿಸಿಕೊಂಡಾಗ ಮನೆಯಲ್ಲಿರುವವರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ, ಸಾಧ್ಯವಾಗಿಲ್ಲ. ರೆಗ್ಯುಲೇಟರ್ ನಲ್ಲಿ ಬೆಂಕಿ ಉರಿದು ಆತಂಕ ಮೂಡಿಸಿದೆ. 
ಅಡುಗೆ ಅನಿಲ ಸಿಲಿಂಡರ್ ಬಳಕೆಯ ಸಂದರ್ಭದಲ್ಲಿ ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಇದಕ್ಕೆ ಸಮರ್ಪಕ ಮಾಹಿತಿ ಹೊಂದಿರಬೇಕು. ಆಗ ಮಾತ್ರ ಅವಘಡಗಳು ಸಂಭವಿಸುವುದನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಅಗ್ನಿಶಾಮಕ ದಳ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net