ನರೇಗಲ್ಲದಲ್ಲಿ ಬೆಂಕಿ ಅವಘಡ

25NRGL1
ನರೇಗಲ್ಲನ ಬುಲ್ಡೋಜರ್ ನಗರದಲ್ಲಿ ಶನಿವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿನ ವಸ್ತುಗಳು ಸುಟ್ಟಿರುವುದು.
Published on

ನರೇಗಲ್ಲ: ಪಟ್ಟಣದ ಬುಲ್ಡೋಜರ್ ನಗರದ ವೀರವ್ವ ಓಲಿ ಎಂಬುವವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ತಗುಲಿ ಮನೆಯಲ್ಲಿನ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.

ಬೆಂಕಿಯಿಂದಾಗಿ ಗೃಹೋಪಯೋಗಿ ವಸ್ತುಗಳು, ಬಟ್ಟೆ, ದವಸ ಧಾನ್ಯ ಸೇರಿದಂತೆ ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ವೀರವ್ವ ಅವರಿಗೆ ಅಪಾರ ಹಾನಿ ಸಂಭವಿಸಿದ್ದು ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಪಪಂ ಮಾಜಿ ಸದಸ್ಯ ಖಾದರಬಾಷಾ ಹೂಲಗೇರಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net