ಪೇರೂರು ಬೆಟ್ಟ ಶ್ರೇಣಿಗಳಲ್ಲಿ ಬೆಂಕಿ

27,,npk,.5
Published on

ನಾಪೋಕ್ಲು: ಸಮೀಪದ ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಪೇರೂರು ಗ್ರಾಮದ ಬೆಟ್ಟ ಶ್ರೇಣಿಗಳಲ್ಲಿ ಮಂಗಳವಾರ ಕಾಣಿಸಿಕೊಂಡಿದ್ದ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ. ಮರ-ಗಿಡಗಳು ಸೇರಿದಂತೆ ಸುಮಾರು ನೂರು ಎಕರೆಗೂ ಅಧಿಕ ಕಾಡು ಭಸ್ಮವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ತೆರಳಿ ಬೆಂಕಿ ನಂದಿಸುವ ಪ್ರಯತ್ನದಲ್ಲಿ ತೊಡಗಿದ್ದರು. ಬೆಂಕಿ ವ್ಯಾಪಕವಾಗಿ ಹಬ್ಬಿರುವುದರಿಂದ ಇನ್ನೂ ಹತೋಟಿಗೆ ಬಂದಿಲ್ಲ ಎಂದು ಮೂಳಗಳು ತಿಳಿಸಿವೆ.

ಬಿಸಿಲಿನ ಝಳ ಹೆಚ್ಚುತ್ತಿದ್ದು ಅಲ್ಲಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಿವೆ. ಬೆಟ್ಟ ಶ್ರೇಣಿಗಳಲ್ಲಿ ರಸ್ತೆ ಸೌಲಭ್ಯ ಇಲ್ಲದೆ ಇರುವುದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಹೊತ್ತಿಕೊಂಡಿರುವ ಸ್ಥಳಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬೆಂಕಿ ವ್ಯಾಪಿಸುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net