ಖಾಸಗಿ ಶಾಲಾ ವಾಹನದಲ್ಲಿ ಬೆಂಕಿ

3 Dwd 6
Published on

ಧಾರವಾಡ: ಖಾಸಗಿ ಶಾಲಾ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಮೂಡಿಸಿದ್ದ ಘಟನೆ ನಗರದಲ್ಲಿ ಸೋಮವಾರ ಬೆಳಗ್ಗೆ ನಡೆಯಿತು. ಇಲ್ಲಿನ ಸಾಯಿರಾಮ್ ಸ್ಕೂಲ್‌ನ ವಾಹನದಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗಲಾಗುತ್ತಿತ್ತು. ಕೋರ್ಟ್ ವೃತ್ತದ ಬಳಿ ಹೋಗುತ್ತಿದ್ದ ವೇಳೆ ವಾಹನದ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ತಕ್ಷಣ ಮಕ್ಕಳನ್ನು ಕೆಳಗೆ ಇಳಿಸಿದ್ದಾನೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net