ಅಂಗಡಿಗೆ ಬೆಂಕಿ, ಸಾಮಗ್ರಿ ಜತೆ ಮಾಲೀಕನೂ ಜೀವಂತ ದಹನ

fire man death
Published on

ಬೆಂಗಳೂರು: ನಗರದ ಹೃದಯಭಾಗದಲ್ಲಿರುವ ಅವೆನ್ಯೂ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿ ವ್ಯಕ್ತಿಯೊಬ್ಬರು ಜೀವಂತ ದಹನವಾಗಿದ್ದಾರೆ.

ಮೆಜೆಸ್ಟಿಕ್​ ಸಮೀಪದ ಅವೆನ್ಯೂ ರಸ್ತೆಯಲ್ಲಿರುವ ಗ್ರಂಧಿಗೆ ಅಂಗಡಿಯಲ್ಲಿ ಇಂದು (ಶುಕ್ರವಾರ) ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ವಾಹನ ಸುಮಾರು ಮುಕ್ಕಾಲು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿತು. ಅಷ್ಟರಲ್ಲಿ ಅಂಗಡಿ ಮಾಲೀಕ ಮನುಕುಮಾರ್ ಸುಟ್ಟು ಕರಕಲಾಗಿದ್ದರು.

ಇಂದು ಮಧ್ಯಾಹ್ನ 1.20ರ ಸುಮಾರಿನಲ್ಲಿ ಗ್ರಂಥಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದು ತಿಳಿದು ಬಂದಿದೆ. ಸುತ್ತಲೂ ದಟ್ಟ ಹೊಗೆ ಆವರಿಸಿದ್ದರಿಂದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಂಗಡಿಯಲ್ಲಿದ್ದ ಸಾಮಗ್ರಿ ಸಮೇತ ಅಂಗಡಿ ಮಾಲೀಕ ಬೆಂಕಿಗೆ ಆಹುತಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net