ಬೆಂಕಿ ಅವಘಡ ನಿಯಂತ್ರಣ ಪ್ರಾತ್ಯಕ್ಷಿಕೆ

New Project (7)
Published on

ಬಂಟ್ವಾಳ: ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಿದ್ದಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬೆಂಕಿ ಅವಘಡ ನಿಯಂತ್ರಣ ಬಗ್ಗೆ ಪ್ರಾತ್ಯಕ್ಷಿಕೆ ಬುಧವಾರ ನಡೆಯಿತು. ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಮಾತನಾಡಿ, ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಶಿಕ್ಷಣದ ಜತೆಗೆ ಬದುಕುವ ಕಲೆ ತಿಳಿಸುವ ಅಗತ್ಯವಿದೆ ಎಂದರು. ಬಂಟ್ವಾಳ ಅಗ್ನಿಶಾಮಕ ದಳದ ಠಾಣಾಧಿಕಾರಿ ರಾಜೇಶ್ ಮತ್ತು ಸಿಬ್ಬಂದಿ ಪ್ರಾತ್ಯಕ್ಷಿಕೆ ನೀಡಿದರು. ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳು ಪಾಲ್ಗೊಂಡರು. ರೋಟರಿ ಕ್ಲಬ್ ಸದಸ್ಯರಾದ ರಾಘವೇಂದ್ರ ಭಟ್, ಹರಿಪ್ರಸಾದ್ ಶೆಟ್ಟಿ, ಸಂತೋಷ್ ಕುಮಾರ್ ಇದ್ದರು. ಶಿಕ್ಷಕ ಮಹೇಶ್ ಕುಮಾರ್ ಸ್ವಾಗತಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net