ಗುಂಡೇಟಿನಿಂದ ಪಾರಾದ ಗ್ರಾಪಂ ಮಾಜಿ ಅಧ್ಯಕ್ಷ!

1spt4
Published on

ಸೋಮವಾರಪೇಟೆ : ಸಮೀಪದ ಗಣಗೂರು ಗ್ರಾಮದಲ್ಲಿ ಭಾನುವಾರ ತಡರಾತ್ರಿ ಅಪರಿಚಿತರು ಹಾರಿಸಿದ ಗುಂಡೇಟಿನಿಂದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮದ ನಿವಾಸಿ ಹಾಗೂ ಮಾಜಿ ಅಧ್ಯಕ್ಷ ಚಂದ್ರಶೇಖರ್ ಗಾಯಗೊಂಡವರು. ರಾತ್ರಿ 9ಗಂಟೆ ಸುಮಾರಿಗೆ ಓಮ್ನಿ ಕಾರಿನಲ್ಲಿ ತಮ್ಮ ಕಾಫಿ ತೋಟಕ್ಕೆ ಹೋಗುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದು, ಕಾರಿನ ಮುಂಭಾಗಕ್ಕೆ ಚಿಲ್ಲುಗಳು ನಾಟಿದ್ದು, ಕೈ ಬೆರಳುಗಳಿಗೆ ಗಾಯವಾಗಿದೆ. ಬಳಿಕ ಗಾಯಾಳು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್.ಪಿ ರಾಮರಾಜನ್, ಡಿವೈಎಸ್‌ಪಿ ಆರ್.ವಿ. ಗಂಗಾಧರಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಿಖೆ ತೀವ್ರಗೊಳಿಸಿದ್ದು, ಅರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net