ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟದಲ್ಲಿ ಬೆಂಕಿ

15BTP01
ಬೆಟ್ಟದಪುರದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ.
Published on

ಬೆಟ್ಟದಪುರ: ಬೆಟ್ಟದಪುರದ ಇತಿಹಾಸ ಪ್ರಸಿದ್ಧ ಶ್ರೀ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟದ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಮರಗಳು ಸುಟ್ಟು ಹೋಗಿವೆ.


ಭಾನುವಾರ ಸಂಜೆ ಕಾಣಿಸಿಕೊಂಡ ಬೆಂಕಿಯ ಜ್ವಾಲೆ ಸೋಮವಾರವೂ ನಿಂತಿರಲಿಲ್ಲ. ಪದೇ ಪದೆ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ. ಅಲ್ಲದೆ ನಿತ್ಯ ನೂರಾರು ಪ್ರವಾಸಿಗರು ಬೆಟ್ಟಕ್ಕೆ ಬರುತ್ತಿದ್ದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಡೆ ಹಾಕಿ ಪರಿಸರ ಹಾಳು ಮಾಡುತ್ತಿದ್ದಾರೆ. ಸೂಕ್ತ ಕ್ರಮ ಕೈಗೊಂಡು ಬೆಟ್ಟದಲ್ಲಿರುವ ಅರಣ್ಯ ಪ್ರದೇಶವನ್ನು ಕಾಪಾಡಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net