

ವಿಜಯಪುರ: ಪಟ್ಟಣದ ಕೋಲಾರ ಮುಖ್ಯರಸ್ತೆಯಲ್ಲಿನ ಎಲೆಕ್ಟ್ರಾನಿಕ್ ಮತ್ತು ಫರ್ನಿಚರ್ ಅಂಗಡಿಯಲ್ಲಿ ಸಂಭವಿಸಿದ ಶಾರ್ಟ್ ಸಕ್ಯೂರ್ಟ್ನಿಂದ ಮೊದಲನೇ ಮಹಡಿ ಯಲ್ಲಿನ ಪೀಠೋ ಪಕರಣಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಂಗಡಿ ನೌಕರ ಬೆಳಗ್ಗೆ 9 ಗಂಟೆಗೆ ಬಾಗಿಲು ತೆರೆದಾಗ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೇವನಹಳ್ಳಿ ಅಗ್ನಿಶಾಮಕ ತಂಡ ಆಗಮಿಸಿ ಬೆಂಕಿ ನಿಂದಿಸಿದರು. ಅಷ್ಟರಲ್ಲಾಗಲೇ ಅಂಗಡಿ ಆಹುತಿಯಾಗಿದೆ. ವಿಜಯಪುರ
ಠಾಣೆಯಲ್ಲಿ ದೂರು ದಾಖಲಾಗಿದೆ.