

ಕಾರವಾರ/Workshop: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಸಿಬ್ಬಂದಿಗಳಿಗೆ ಅಗ್ನಿ ಅವಘಡಗಳನ್ನು ಎದುರಿಸುವ ಕುರಿತ ಕಾರ್ಯಗಾರವನ್ನು ಗುರುವಾರ ನಡೆಸಲಾಯಿತು. ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಕಾರ್ಯಾಗಾರವನ್ನು ಉದ್ಘಾಟಿಸಿದರು. ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಅಗ್ನಿ ನಿವಾರಣೆ ಶಮನದ ಬಗ್ಗೆ ಉಪನ್ಯಾಸ ಮತ್ತು ಪ್ರಾತ್ಯಕ್ಷತೆಯನ್ನು ನೀಡಲಾಯಿತು.
ಯಲ್ಲಾಪುರ ಅಗ್ನಿಶಾಮಕ ಠಾಣಾಧಿಕಾರಿ ಶಂಕರ ಅಂಗಡಿ ನೇತೃತ್ವದ ತಂಡದಿಂದ ಪ್ರಾತ್ಯಕ್ಷಿಕೆ ನಡೆಸಲಾಯಿತು. ಈ ಸಂದರ್ಭದಲ್ಲಿ, ಅಪರ ಜಿಲ್ಲಾಧಿಕಾರಿ ಸಾಜೀದ್ ಅಹ್ಮದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.