ಅಂಗಡಿಗೆ ಬೆಂಕಿ; ವಸ್ತುಗಳು ಭಸ್ಮ

ಅಂಗಡಿಗೆ ಬೆಂಕಿ; ವಸ್ತುಗಳು ಭಸ್ಮ
ಅಂಗಡಿಗೆ ಬೆಂಕಿ; ವಸ್ತುಗಳು ಭಸ್ಮ
Published on

 ರಾಯಚೂರು

ನಗರದ ಮೋತಿಮಹಲ್ ಮಸೀದಿ ಹತ್ತಿರ ಆಟೋಮೊಬೈಲ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿ ಅಂಗಡಿಯಲ್ಲಿ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ಬುಧವಾರ ರಾತ್ರಿ ಜರುಗಿದೆ.

 ಅಸ್ಸಾರಿ ಎಂಬುವರಿಗೆ ಸೇರಿದ ಆಟೋಮೊಬೈಲ್ ಅಂಗಡಿಯಲ್ಲಿ ಸುಮಾರು 10 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ನಗರದ ಸದ‌ರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net