ಪಟಾಕಿ ಮಾರಾಟ ಮಳಿಗೆಗಳ ಮೇಲೆ ದಾಳಿ

JLR ph 3 Oct 20 Malige Mele daali
Published on

ಜಗಳೂರು: ಪಟ್ಟಣದಲ್ಲಿ ಅನಧೀಕೃತವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಸೋಮವಾರ ತಹಸೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪಟಾಕಿ ಬ್ಯಾಗ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪಟ್ಟಣ, ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಮಾರಾಟ ನಿಷೇಧ ಮಾಡಲಾಗಿದ್ದು, ಹರ್ಷಿತ್ ಕಾಲೇಜು ಸಮೀಪ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ಪಟ್ಟಣದೊಳಗೆ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ತಹಸೀಲ್ದಾರ್ ಸೈಯದ್ ಕಲೀಂಉಲ್ಲಾ, ಪಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ಪಿಎಸ್​ಐ ಗಾದಿಲಿಂಗಪ್ಪನವರ ತಂಡ ಪಟಾಕಿ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ.

ಈ ವೇಳೆ ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಮಾತನಾಡಿ, ಸರ್ಕಾರದ ಆದೇಶದಂತೆ ಹಸಿರು ಪಟಾಕಿ ಹೊರತುಪಡಿಸಿ ಇತರೆ ಯಾವ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಮತ್ತು ಪಟ್ಟಣದ ಹೊರವಲಯಗಳಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಮಾರಾಟ ಮಾಡಬೇಕು. ಆದರೆ ಕೆಲವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ ದಾಳಿ ಮಾಡಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net