

ಕುಶಾಲನಗರ: ದೀಪಾವಳಿ ಹಬ್ಬದಲ್ಲಿ ಸಿಡಿಸುವ ಮದ್ದುಗಳು ಹಾಗೂ ಪಟಾಕಿಗಳು ಪ್ರಾಣಿ-ಪಕ್ಷಿಗಳ ಜೀವಕ್ಕೂ ಕಂಟಕ ತರಲಿದೆ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಆತಂಕ ವ್ಯಕ್ತಪಡಿಸಿದರು.
ಹೆಬ್ಬಾಲೆ ಪ್ರೌಢಶಾಲೆಯಲ್ಲಿ ರಾಜ್ಯ ವಿಜ್ಞಾನ ಪರಿಷತ್ ಕೊಡಗು ಜಿಲ್ಲಾ ಸಮಿತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಶಾಲೆಯ ಇಕೋ ಕ್ಲಬ್ ವತಿಯಿಂದ ಸ್ವಚ್ಛ ದೀಪಾವಳಿ ಶುಭ ದೀಪಾವಳಿ ಆಚರಣೆಯ ಮಹತ್ವದ ಕುರಿತು ಮಾತನಾಡಿದರು.
ಪಟಾಕಿಗಳು, ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತದೆ. ಇದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜತೆಗೆ ಪ್ರಾಣಿ-ಪಕ್ಷಿಗಳ ಜೀವಕ್ಕೂ ಅಪಾಯವಿದೆ. ಹಾಗಾಗಿ, ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಪ್ಲಾಸ್ಟಿಕ್ ಮುಕ್ತ ಹಾಗೂ ಮಾಲಿನ್ಯ ರಹಿತವಾಗಿ ಆಚರಿಸಬೇಕಿದೆ ಎಂದು ಸಲಹೆ ನೀಡಿದರು.
ರಾಜ್ಯ ವಿಜ್ಞಾನ ಪರಿಷತ್ ಕೊಡಗು ಜಿಲ್ಲಾ ಸಮಿತಿ ನಿರ್ದೇಶಕ ಎಂ.ಎನ್.ವೆಂಕಟನಾಯಕ್ ಮಾತನಾಡಿದರು. ರಾಜ್ಯ ವಿಜ್ಞಾನ ಪರಿಷತ್ ಕೊಡಗು ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷ ಭಾರದ್ವಾಜ್ ಕೆ.ಆನಂದತೀರ್ಥ, ಹೆಬ್ಬಾಲೆ ಪ್ರೌಢಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಲ್.ರಮೇಶ್, ಪ್ರೌಢಶಾ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಚ್.ವಿ.ಶಿವಪ್ಪ, ಪ್ರಾಂಶುಪಾಲ ಎಂ.ಕೆ.ವಿಜಯಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಬಸವರಾಜಶೆಟ್ಟಿ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕ ಎಂ.ಎನ್.ಚಂದ್ರಮೋಹನ್, ಮೈಸೂರಿನ ಉದ್ಯಮಿ ಎಚ್.ಕೆ.ಪ್ರಸನ್ನ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ನಾಗೇಶ್, ಕೋಶಾಧಿಕಾರಿ ಕೆ.ವಿ.ಉಮೇಶ್, ಕಸಾಪ ಹೆಬ್ಬಾಲೆ ವಲಯ ಘಟಕದ ಅಧ್ಯಕ್ಷ ಎಂ.ಎನ್.ಮೂರ್ತಿ, ಕಾರ್ಯದರ್ಶಿ ಕವಿತಾ ಪುಟ್ಟೇಗೌಡ, ನಿವೃತ್ತ ಮುಖ್ಯ ಶಿಕ್ಷಕ ಎಚ್.ಎಸ್.ಲೋಕೇಶ್, ವಿವಿಧ ಸಂಸ್ಥೆಗಳ ಪ್ರಮುಖರಾದ ಎ.ಆರ್.ಮಮತಾ, ಟಿ.ಜಿ.ಯತೀಶ್, ಕೆ.ಕೆ.ನಾಗರಾಜಶೆಟ್ಟಿ, ಎಚ್.ಬಿ.ದಿನೇಶಚಾರಿ, ಟಿ.ಬಿ.ಮಂಜುನಾಥ್ ಇತರರು ಇದ್ದರು.