ಪೊದೆಗೆ ಬಿದ್ದ ಬೆಂಕಿ ನಂದಿಸಿದ ಅಗ್ನಿಶಾಮಕ ದಳ

Oplus_131072
ಯಳಂದೂರು ಪಟ್ಟಣದ ಕುಂಬಾರಗುಂಡಿಯಲ್ಲಿ ಗುರುವಾರ ಮಧಾಹ್ನ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿದ ಅಗ್ನಿಶಾಮಕ ಸಿಬ್ಬಂದಿ.
Published on

ಯಳಂದೂರು: ಪಟ್ಟಣದ ಕುಂಬಾರ ಗುಂಡಿಯಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗ ಇದ್ದ ಪೊದೆಗೆ ಗುರುವಾರ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತ ಆವರಿಸುತ್ತಿದ್ದಂತೆಯೇ ಇಲ್ಲಿನ ವಾಸಿಗಳು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಈ ಸ್ಥಳದಲ್ಲಿ ಕಳೆ ಗಿಡಗಳು ಎತ್ತರಕ್ಕೆ ಬೆಳೆದಿದ್ದು, ಬಿಸಿಲಿಗೆ ಒಣಗಿ ನಿಂತಿತ್ತು. ಮಧ್ಯಾಹ್ನ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿತು. ಪಕ್ಕದಲ್ಲೇ ಗೌತಮ್ ಬಡಾವಣೆ ಬಳಿ ಮೇವಿನ ಹುಲ್ಲಿನ ಬಣವೆ ಕೂಡ ಇತ್ತು. ತಕ್ಷಣ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಈ ಸ್ಥಳವು ಪಟ್ಟಣ ಪಂಚಾಯಿತಿಗೆ ಸೇರಿದ್ದಾಗಿದ್ದು, ಇಲ್ಲಿ ಕಳೆ ಗಿಡಗಳನ್ನು ತೆರವುಗೊಳಿಸದಿರುವುದೇ ಬೆಂಕಿ ಹೊತ್ತಿಕೊಳ್ಳಲು ಕಾರಣವಾಗಿದೆ ಎಂಬುದು ಸ್ಥಳೀಯರ ಆರೋಪವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net