ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಕುಷ್ಟಗಿ ಬಸ್‌ನಿಲ್ದಾಣ ಹಿಂಭಾಗದಲ್ಲಿ ಕಾರಿನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
Published on

ಕುಷ್ಟಗಿ: ಖಾಲಿ ನಿವೇಶನದಲ್ಲಿ ಬೆಳೆದು ನಿಂತ ನಿರುಪಯುಕ್ತ ಗಿಡಗಂಟಿಗಳ ನೆರಳಿನಲ್ಲಿ ನಿಲ್ಲಿಸಿದ್ದ ಹಳೆಯ ಕಾರೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರಿನ ಮುಂಭಾಗ ಸುಟ್ಟಿರುವ ಘಟನೆ ಪಟ್ಟಣದ ಬಸ್ ನಿಲ್ದಾಣ ಹಿಂಭಾಗದ ಬುತ್ತಿಬಸವೇಶ್ವರ ನಗರದಲ್ಲಿ ಭಾನುವಾರ ಸಂಭವಿಸಿದೆ.

ಕಸಕ್ಕೆ ಹೊತ್ತಿಕೊಂಡ ಬೆಂಕಿಯ ಕಿಡಿ ಕಾರಿಗೆ ತಗುಲಿ ಅವಘಡ ಸಂಭವಿಸಿದೆ. ಸುತ್ತಲಿನ ನಿವಾಸಿಗಳು ಬೆಂಕಿ ನಂದಿಸಲು ಯತ್ನಿಸಿದರಾದರೂ ನಿಯಂತ್ರಣಕ್ಕೆ ಬರಲಿಲ್ಲ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಬಹುದಿನಗಳಿಂದ ನಿಲ್ಲಿಸಿದ್ದ ಕಾರಿನ ಬಾನೆಟ್ ತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಪ್ರಯಾಸ ಪಡುವಂತಾಯಿತು. ಅಗ್ನಿಶಾಮಕ ಠಾಣಾಧಿಕಾರಿ ರಾಜು ನರಸಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net