ಪಟಾಕಿ ವ್ಯಾಪಾರ ಜೋರು

IMG20231112122309
Published on

ಹನೂರು: ದೀಪಾವಳಿ ಹಬ್ಬದ ಅಂಗವಾಗಿ ಪಟ್ಟಣದಲ್ಲಿ ತೆರೆದಿರುವ ಪಟಾಕಿ ಮಾರಾಟ ಮಳಿಗೆಗಳಲ್ಲಿ ಭಾನುವಾರ ವ್ಯಾಪಾರ ಜೋರಾಗಿತ್ತು.


ಬೆಂಗಳೂರಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಈ ಬಾರಿ ಪಟಾಕಿ ಮಾರಾಟ ಹಾಗೂ ಸಿಡಿಸುವಿಕೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ. ಹಾಗಾಗಿ ಹನೂರು ಪಟ್ಟಣದಲ್ಲಿ 3 ಪಟಾಕಿ ಮಾರಾಟ ಮಳಿಗೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಅನುಸರಿಸುವ ಸಂಬಂಧ ಪಟಾಕಿ ಮಾರಾಟಗಾರರಿಗೆ ಸಭೆ ನಡೆಸಿ ಸೂಚನೆ ನೀಡಲಾಗಿದೆ.


ಅಧಿಕಾರಿಗಳ ತಂಡ ಮಳಿಗೆಗಳಿಗೆ ತೆರಳಿ ಪರಿಶೀಲನೆ ನಡೆಸಿದೆ. ಹಸಿರು ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಇವರು ಪಟಾಕಿಗಳನ್ನು ಮಾತ್ರ ಕಡ್ಡಾಯವಾಗಿ ಮಾರಾಟ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತಾಲೂಕಿನ ವಿವಿಧ ಗ್ರಾಮಗಳ ಜನರು ಪಟ್ಟಣಕ್ಕೆ ಆಗಮಿಸಿ ಹಬ್ಬಕ್ಕೆ ಪಟಾಕಿ ಖರಿದೀಸಿದರು.
ಈಗಾಗಲೇ ಹನೂರು ಭಾಗದ ಜನರಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿರುವುದು ಒಂದೆಡೆಯಾದರೆ ಮಾದಪ್ಪನ ಸನ್ನಿಧಿಯ ಮಲೆಮಹದೇಶ್ವರ ಬೆಟ್ಟದಲ್ಲೂ ದೀಪಾವಳಿ ಸಂಭ್ರಮ ಮನೆ ಮಾಡಿತ್ತು. ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಮ.ಬೆಟಕ್ಕೆ ಆಗಮಿಸಿದ್ದು, ಬಹುತೇಕ ಭಕ್ತರು ಅಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net