ದೀಪಾವಳಿಗೆ ಪಟಾಕಿ ಖರೀದಿ ಜೋರು

20 SARAG 3
ಸರಗೂರು ಪಟ್ಟಣದ ಆಶ್ರಯ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಪಟಾಕಿ ಅಂಗಡಿಗಳಲ್ಲಿ ಖರೀದಿ ಜೋರಾಗಿದೆ.
Published on

ಸರಗೂರು: ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಎಲ್ಲೆಲ್ಲೂ ಸಂಭ್ರಮ, ಸಡಗರ. ಹಿರಿಯರು ಕಿರಿಯರೆನ್ನದೆ ಪಟಾಕಿ ಸಿಡಿಸಿ ಸಂಭ್ರಮಿಸುವ ಹಬ್ಬವಾಗಿದೆ. ಇದಕ್ಕಾಗಿ ಎಲ್ಲೆಡೆ ಪಟಾಕಿ ಖರೀದಿ ಜೋರಾಗಿದೆ.

ತಾಲೂಕಿನಲ್ಲಿ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದರೂ ಜನರು ಪಟಾಕಿ ಖರೀದಿಗೆ ಉತ್ಸಾಹ ತೋರುತ್ತಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ಕೇವಲ ಒಂದು ಕಡೆ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಪಟ್ಟಣದ ಆಶ್ರಯ ಬಡಾವಣೆ ಬಳಿ ಕಬಿನಿ ನಿರಾವರಿ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕ ಪಟಾಕಿ ಮಳಿಗೆಗಳನ್ನು ನಿರ್ಮಿಸಲು ಸ್ಥಳ ನಿಗದಿ ಮಾಡಿದ್ದು, ಈ ಅಂಗಡಿಗಳಲ್ಲಿ ಖರೀದಿ ಜೋರಾಗಿದೆ.

ಈ ಬಾರಿ ಪಟಾಕಿಗಳ ಬೆಲೆ ಕಳೆದ ವರ್ಷಕ್ಕಿಂತ ತುಸು ಜಾಸ್ತಿಯಾಗಿದೆ. ಆಶ್ರಯ ಬಡಾವಣೆ ಬಳಿ 10 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಮಂಗಳವಾರ ಮತ್ತು ಬುಧವಾರ ಪಟಾಕಿಗಳ ಮಾರಾಟ ಹೆಚ್ಚಾಗುವ ನಿರೀಕ್ಷೆ ಇದೆ. ಗ್ರಾಮೀಣ ಭಾಗದಿಂದ ಜನರು ಪಟಾಕಿ ಖರೀದಿಗೆ ಬರುತ್ತಿದ್ದಾರೆ ಎಂದು ಪಟಾಕಿ ಮಾರಾಟಗಾರ ನಾಗರಾಮ್ ತಿಳಿಸಿದರು.

ಪಟ್ಟಣ ಪಂಚಾಯಿತಿ ಸೂಚಿಸಿರುವ ಈ ಪ್ರದೇಶದಲ್ಲಿ ಮಾತ್ರ ಪಟಾಕಿ ಮಾರಲು ಅವಕಾಶವಿದೆ. ಜನರು ಕೂಡ ಇಲ್ಲಿಂದ ಮಾತ್ರ ಖರೀದಿಸಬೇಕು ಎಂದೂ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net