ಮಂಡ್ಯದಲ್ಲಿ ಈ ಸ್ಥಳದಲ್ಲಿ ಮಾತ್ರ ಪಟಾಕಿ ಮಾರಾಟ-ತಪ್ಪಿದರೆ ಕಾನೂನು ಕ್ರಮಕ್ಕೆ ಸೂಚನೆ

29_10_Mdy_Dc Meeting
Published on

ಮಂಡ್ಯ: ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ನಿಗದಿಪಡಿಸಿರುವ ಸ್ಥಳದಲ್ಲಿ ಮಾತ್ರ ಪಟಾಕಿ ಮಾರಾಟಬೇಕು. ತಪ್ಪಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಂಗಡಿ ಮಾಲೀಕರು ಮತ್ತು ವಿತರಕರಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯ ನಗರದ ಒಳಾಂಗಣ ಕ್ರೀಡಾಂಗಣ ಪ್ರವೇಶದ ಖಾಲಿ ಜಾಗ, ಮದ್ದೂರು ಪಟ್ಟಣದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಆವರಣ, ಪಾಂಡವಪುರದಲ್ಲಿ ಸಂತೇ ಮೈದಾನ, ಮಳವಳ್ಳಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣ, ನಾಗಮಂಗಲದ ಬುಡಬುಡಮ್ಮ ದೇವಸ್ಥಾನದ ಆವರಣ, ಶ್ರೀರಂಗಪಟ್ಟಣದ ಪುರಸಭೆ ಕಚೇರಿ ಮುಂಭಾಗ, ಕೆ.ಆರ್.ಪೇಟೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದ ಪುರಸಭೆ ವ್ಯಾಪ್ತಿಗೆ ಸೇರಿದ ಜಾಗ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಸ್ಥಳೀಯ ಪ್ರಾಧಿಕಾರ ಹಾಗೂ ಪೊಲೀಸ್ ಅಥವಾ ಅಗ್ನಿಶಾಮಕ ಅಧಿಕಾರಿಗಳಿಂದ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರವೇ ಅವಕಾಶವಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net