ಸುಳ್ಯದಲ್ಲಿ ಗುಂಡು ಹಾರಾಟ ಯುವಕ ಪಾರು

IMG_20220606_093044
Published on

ಮಂಗಳೂರು: ಸುಳ್ಯದ ವೆಂಕಟರಮಣ ಸೊಸೈಟಿಯ ಬಳಿ ಭಾನುವಾರ ರಾತ್ರಿ ಯುವಕನೊಬ್ಬನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಆದರೆ ಗುಂಡು ಗುರಿ ತಪ್ಪಿ ಕಾರಿಗೆ ತಾಗಿದ ಹಿನ್ನೆಲೆಯಲ್ಲಿ ಯುವಕ ಅಪಾಯದಿಂದ ಪಾರಾಗಿದ್ದಾರೆ.
ಸುಳ್ಯದ ಮೊಗರ್ಪಣೆ ಯಲ್ಲಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ ಜಯನಗರದ ಮಹಮ್ಮದ್ ಶಾಹಿ ಎಂಬವರು ತನ್ನ ಕಾರನ್ನು ನಿಲ್ಲಿಸಿ ತನ್ನ ತಂಗಿಯ ಮನೆಗೆ ಹೋಗಿದ್ದರು. ಅಲ್ಲಿಂದ ಹಿಂತಿರುಗಿ ಅವರು ತನ್ನ ಕಾರನ್ನು ಏರುತ್ತಿರುವ ಸಂದರ್ಭ ಹಿಂದಿನಿಂದ ಸ್ಕಾರ್ಪಿಯೋ ವಾಹನದಲ್ಲಿ ಬಂದ ದುಷ್ಕರ್ಮಿಗಳು ಶಾಹಿಯವರ ಕಡೆಗೆ ಗುಂಡು ಹಾರಿಸಿದ್ದಾರೆ.
ಗುಂಡು ಅದೃಷ್ಟವಶಾತ್ ಶಾಹಿಗೆ ತಾಗದೆ ಅವರ ಕಾರಿಗೆ ತಾಗಿ ಕಾರು ಜಖಂಗೊಂಡಿದೆ.
ಗುಂಡಿನ ಚಿಲ್ ರಟ್ಟಿದ ಪರಿಣಾಮ ಶಾಹಿಯವರ ಹೊಟ್ಟೆಯ
ಬಳಿ ಗಾಯವಾಗಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡು ಹಾರಿಸಿದ ದುಷ್ಕರ್ಮಿಗಳ ವಾಹನ ಪತ್ತೆಯಾಗಿಲ್ಲ. ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net