ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು

IMG-20220611-WA0027
Published on

ಮಂಗಳೂರು: ನಗರದ ಹೊರ ವಲಯದ ಪಣಂಬೂರು ಮೀನಕಳಿಯದಲ್ಲಿ ಜೂ.6 ರಂದು ನಡೆದ ರೌಡಿಶೀಟರ್ ನ ಕೊಲೆ ಪ್ರಕರಣದ ಆರೋಪಿಗಳು ಶನಿವಾರ ಬೆಳಗ್ಗೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಅವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಆರೊಪಿಗಳಾದ ಅರ್ಜುನ್ ಮೂಡುಶೆಡ್ಡೆ ಹಾಗೂ ಮನೋಜ್ ಕಾಲಿಗೆ ಗುಂಡೇಟು ತಗಲಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.
ಸಿಸಿಬಿ ನಿರೀಕ್ಷಕ ಮಹೇಶ್ ಪ್ರಸಾದ್ ಅವರು ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಮೂಲ್ಕಿ ಠಾಣಾ ವ್ಯಾಪ್ತಿಯ ಗ್ಲೋಬಲ್ ಹೆರಿಟೇಜ್ ಬಡಾವಣೆಯಲ್ಲಿ ಘಟನೆ ನಡೆದಿದೆ.
ರಾಜಾ ಕೊಲೆ ಪ್ರಕರಣದಲ್ಲಿ ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಇನ್ನಷ್ಟು ಆರೋಪಿಗಳ ಬಂಧನಕ್ಕೆವಶದಲ್ಲಿದ್ದ ಆರೋಪಿಗಳನ್ನು ಕೊಂಡೊಯ್ಯುವ ವೇಳೆ ಪೊಲೀಸ್‌ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
ಪಿಎಸ್ ಐ ನಾಗೇಂದ್ರ, ಎಎಸ್ಐ ಡೇವಿಡ್, ಹೆಡ್ ಕಾನ್ಸ್‌ಟೇಬಲ್ ಸಂತೋಷ್‌ ಪೂಜಾರಿ ಎಂಬವರಿಗೆ ಗಾಯವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net