ಸಿಬ್ಬಂದಿಗೆ ಪ್ರಥಮ ಚಿಕಿತ್ಸಾ ತರಬೇತಿ ಅಗತ್ಯ

First Aid camp
Published on

ಹುಬ್ಬಳ್ಳಿ: ವಿಜಯನಗರ ಔದ್ಯೋಗಿಕ ಆರೋಗ್ಯ ಮತ್ತು ಕೈಗಾರಿಕಾ ಸುರಕ್ಷತಾ ಸಂಸ್ಥೆಯ ಸಹಯೋಗದೊಂದಿಗೆ ನಗರದ ಗೋಕುಲ ರಸ್ತೆಯ ವಾಕರಸಾ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ತಾಂತ್ರಿಕ ಸಿಬ್ಬಂದಿಗೆ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರವನ್ನು ಗುರುವಾರ ಏರ್ಪಡಿಸಲಾಗಿತ್ತು.

ವಾಕರಸಾ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸಿಬ್ಬಂದಿಗೆ ಪ್ರಥಮ ಚಿಕಿತ್ಸೆ ಅತ್ಯವಶ್ಯ. ಹಾಗಾಗಿ ವಿವಿಧ ಘಟಕದ ಸಿಬ್ಬಂದಿ ತರಬೇತಿ ನೀಡಲಾಗುತ್ತಿದೆ. ನೀವು ಶಿಸ್ತು ಬದ್ಧರಾಗಿ ತರಬೇತಿ ಪಡೆದು ನಿಮ್ಮ ಘಟಕಗಳಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ತರಬೇತುದಾರ ಪ್ರವೀಣ ಮಾತನಾಡಿ, ಪ್ರಥಮ ಚಿಕಿತ್ಸೆಯು ಕೆಲಸ ನಿರ್ವಹಿಸುವ ಸ್ಥಳದಲ್ಲಿ ಮಾತ್ರವಲ್ಲದೆ ಮನೆಗಳಲ್ಲಿಯೂ ಅವಶ್ಯಕ. ಪ್ರಥಮ ಚಿಕಿತ್ಸೆಯು ಕುಟುಂಬವನ್ನು ಸಂರಕ್ಷಿಸುತ್ತದೆ. ಪ್ರಥಮ ಚಿಕಿತ್ಸೆಯ ಎಲ್ಲ ವಿಧಗಳನ್ನು ಹೇಳಿಕೊಡಲಾಗುತ್ತಿದೆ ಎಂದರು.

ಶಿಬಿರದಲ್ಲಿ 9 ವಿಭಾಗಗಳ ಘಟಕ, ವಿಭಾಗೀಯ ಕಾರ್ಯಾಗಾರ ಹಾಗೂ ಪ್ರಾದೇಶಿಕ ಕಾರ್ಯಾಗಾರಗಳಿಂದ 55 ತಾಂತ್ರಿಕ ಸಿಬ್ಬಂದಿ ಪ್ರಥಮ ಚಿಕಿತ್ಸೆಯ ತರಬೇತಿ ಪಡೆದರು. ವಿರೂಪಾಕ್ಷ ಕಟ್ಟಿಮನಿ ನಿರೂಪಿಸಿದರು. ಸಾರ್ವಜನಿಕ ಸಂಪರ್ಕಾಧಿಕಾರಿ ನವೀನಕುಮಾರ ತಿಪ್ಪಾರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net