ಉಡುಪಿ ಜಿಲ್ಲೆಯಲ್ಲಿ ಮೊದಲ ಕರೊನಾ ವೈರಸ್ ಪ್ರಕರಣ ಪತ್ತೆ

Corona
Published on

ಉಡುಪಿ: ಜಿಲ್ಲೆಯಲ್ಲಿ ಬುಧವಾರ ಮೊದಲ ಕರೊನಾ ವೈರಸ್ ಪ್ರಕರಣ ಪತ್ತೆಯಾಗಿದೆ.

ದುಬೈನಿಂದ ಮಾ.18ರಂದು ಆಗಮಿಸಿದ್ದ ಮಣಿಪಾಲದ 34 ವರ್ಷದ ವ್ಯಕ್ತಿಗೆ ಜ್ವರದ ಕಾರಣ ಮಾ. 23 ರಂದು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಪ್ರಾಥಮಿಕ ವರದಿಯಲ್ಲಿ ಕರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net