

ಕೊಕ್ಕಡ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ, ಪ್ರಾಥಮಿಕ ಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ಧರ್ಮಸ್ಥಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿ ಸಮರ್ಥ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ವೈದ್ಯ ಡಾ.ಗಣೇಶ್ ಪ್ರಸಾದ್ ಹಾಗೂ ಜ್ಯೋತಿ ದಂಪತಿಯ ಪುತ್ರ.