

ಕಿನ್ನಿಗೋಳಿ: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ವತಿಯಿಂದ ಪುತ್ತೂರು ತಾಲೂಕು ಉಪ್ಪಿನಂಗಡಿಯ ಕಾಂಚನಾ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಜಂಪ್ ರೋಪ್ ಪಂದ್ಯಾಟದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಇಂಗ್ಲಿಷ್ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಾದ ಕ್ಷಿತಿಜ್ ಕೆ. ಹಾಗೂ ಪ್ರಣವಿ ಡಬಲ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದುರ್ಗಾಪ್ರಸಾದ್ ತರಬೇತಿ ನೀಡಿದ್ದಾರೆ.