ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ

17 vikram 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಅಮರಸಿಂಹನ ಅಮರಕೋಶ ಕಂಠಪಾಠ ಮಾಡಿ ಒಪ್ಪಿಸುವ ಸ್ಪರ್ಧೆಯಲ್ಲಿ ಧಾರವಾಡದ ಶ್ರೀ ಶಂಕರಾಚಾರ್ಯ ಸಂಸ್ಕೃತ ಪಾಠ ಶಾಲೆ ವಿದ್ಯಾರ್ಥಿ ಶಂಕರಶರ್ಮಾ ಕೃಷ್ಣ ಜೋಶಿ ಪ್ರಥಮ ಸ್ಥಾನ ಪಡೆದು ಅಖಿಲ ಭಾರತೀಯ ಸ್ತರದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಹರಿದ್ವಾರದಲ್ಲಿ ಅಖಿಲ ಭಾರತೀಯ ಸ್ತರದ ಸ್ಪರ್ಧೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net