

ವಿಜಯವಾಣಿ ಸುದ್ದಿಜಾಲ ಧಾರವಾಡ
ಸ್ವರ್ಣವಲ್ಲಿ ಸಂಸ್ಥಾನ ಮಠವು ಭಗವದ್ಗೀತಾ ಅಭಿಯಾನದ ಅಂಗವಾಗಿ ವಿಜಯಪುರದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾಲೂಕಿನ ನೀರಲಕಟ್ಟಿ ಯರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ವಿದ್ಯಾರ್ಥಿಗಳಾದ ದಾನೇಶ ಎಂ. ಹಾಗೂ ವೀರರಾಜ ಕೆ. ಪ್ರಥಮ ಸ್ಥಾನ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ, ಪ್ರಾಚಾರ್ಯ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.