ಗೀತ ಗಾಯನ ಸ್ಪರ್ಧೆಯಲ್ಲಿ ಫಸ್ಟ್

College student First
Published on

ಕಲಘಟಗಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಧಾರವಾಡ ವತಿಯಿಂದ ಆಯೋಜಿಸಿದ್ದ ಗೀತ ಗಾಯನ ಸ್ಪರ್ಧೆಯಲ್ಲಿ ತಾಲೂಕಿನ ಗಳಗಿ- ಹುಲಕೊಪ್ಪ ಗ್ರಾಮದ ಶ್ರೀಮತಿ ಶಿವರಾಜ ದೇವಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಆರು ರೇಂಜರ್ಸ್ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದ ಪದವಿಪೂರ್ವ ಮಹಾವಿದ್ಯಾಲಯಗಳ ಟೆನ್ನಿಕೋಯಿಟ್ ಪಂದ್ಯಾವಳಿಯಲ್ಲಿ ನಾಲ್ಕು ಕ್ರೀಡಾಪಟುಗಳು ಹಾಗೂ ಜೋಡೋ ಪಂದ್ಯಾವಳಿಯಲ್ಲಿ ಇಬ್ಬರು ಕ್ರೀಡಾಪಟುಗಳು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಅಧ್ಯಕ್ಷ ಯೇಸು ಆರ್. ಮಿಶ್ರಾ, ಪ್ರಾಚಾರ್ಯ ಡಾ. ಉದಯ ನಾಯಕ, ದೈಹಿಕ ಶಿಕ್ಷಣ ಉಪನ್ಯಾಸಕರಾದ ಆರ್.ಬಿ. ಚವ್ಹಾಣ, ಮುಖ್ಯಾಧ್ಯಾಪಕರು ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net