

ಬೆಳ್ತಂಗಡಿ: ಕರ್ನಾಟಕ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕಿ ಅಕ್ಕಮ್ಮ 45 ವರ್ಷ ಮೇಲ್ಪಟ್ಟ ಮಹಿಳಾ ಕಲಾತ್ಮಕ ವೈಯಕ್ತಿಕ ಯೋಗಾಸನ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯಮಟ್ಟದ ಯೋಗಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದು, ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕ ಪಡೆದು, ರಾಷ್ಟ್ರಮಟ್ಟದ ಕ್ರೀಡೆಗೆ ಅರ್ಹತೆ ಪಡೆದಿದ್ದಾರೆ.