ಮೊದಲ ಹಂತದ ಗ್ರಾಪಂ ಚುನಾವಣೆ: ಬಳ್ಳಾರಿ ಜಿಲ್ಲೆಯಲ್ಲಿ 330 ಅಭ್ಯರ್ಥಿಗಳು ಅವಿರೋಧ ಆಯ್ಕೆ

Gramayana Election Logo_2020
Published on

ಬಳ್ಳಾರಿ: ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಜಿಲ್ಲೆಯ 87 ಗ್ರಾಪಂಗಳ 1738 ಸ್ಥಾನಗಳಲ್ಲಿ 330 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. 1373 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು 3290 ಜನರು ಕಣದಲ್ಲಿದ್ದಾರೆ.

ಬಳ್ಳಾರಿ, ಕುರುಗೋಡು, ಸಿರಗುಪ್ಪ, ಹೊಸಪೇಟೆ ಹಾಗೂ ಕಂಪ್ಲಿ ತಾಲೂಕಿನಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಬಳ್ಳಾರಿ ತಾಲೂಕಿನ 522 ಸ್ಥಾನಗಳ ಪೈಕಿ 73 ಕಡೆ ಅವಿರೋಧ ಆಯ್ಕೆಯಾಗಿದೆ. ಕುರುಗೋಡು ತಾಲೂಕಿನಲ್ಲಿ 241 ಸ್ಥಾನಗಳಲ್ಲಿ 95, ಸಿರಗುಪ್ಪದಲ್ಲಿ 489 ಸ್ಥಾನಗಳ ಪೈಕಿ 93 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಹೊಸಪೇಟೆಯ 274 ಸ್ಥಾನಗಳ ಪೈಕಿ 41 ಹಾಗೂ ಕಂಪ್ಲಿಯಲ್ಲಿ 212 ಸ್ಥಾನಗಳಲ್ಲಿ 28 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕುರುಗೋಡು ತಾಲೂಕಿನಲ್ಲಿ ಅತಿ ಹೆಚ್ಚು ಅವಿರೋಧ ಆಯ್ಕೆಗಳು ನಡೆದಿವೆ. ಬಳ್ಳಾರಿ ತಾಲೂಕಿನಲ್ಲಿ ಅತಿ ಹೆಚ್ಚಿನ 1098 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 5149 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು. ಡಿ.22ರಂದು ಮತದಾನ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net