

ಕೆ.ಆರ್.ಪೇಟೆ : ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ತಾಲೂಕು ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಕ್ರೈಸ್ತ ಕಿಂಗ್ ಕಾಲೇಜಿನ ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಶಟಲ್ ಬ್ಯಾಡ್ಮಿಂಟನ್ ಆಟಗಾರರಾದ ಬಿ.ವೈ.ಗುರು, ಸಯ್ಯದ್ ಅರಾಮ್, ಸುಮಂತ್, ನಿರ್ಮಲ್ ಸಿಂಗ್. ಸಿ.ಪರೀಕ್ಷಿತ್ ಕಡಹೆಮ್ಮಿಗೆ ಎಸ್.ಬಿ ಗೊಕುಲ್ ಪಂದ್ಯದಲ್ಲಿ ಭಾಗವಹಿಸಿದ್ದರು. ಇವರನ್ನು ಕಾಲೇಜಿನ ಉಪನ್ಯಾಸಕರು ಅಭಿನಂದಿಸಿದ್ದಾರೆ.