‘ಸ್ವನಿಧಿ, ವಿಶ್ವಕರ್ಮ’ ರಾಜ್ಯಕ್ಕೆ ಪ್ರಥಮ ಸ್ಥಾನ

12-ramdas
Published on


ಮೈಸೂರು: ಪಿಎಂ-ಸ್ವನಿಧಿ ಹಾಗೂ ಪಿಎಂ ವಿಶ್ವಕರ್ಮ ಯೋಜನೆಗಳು ಪ್ರಧಾನಿ ನರೇಂದ್ರ ಮೋದಿ ಕನಸಿನ ಕಾರ್ಯಕ್ರಮಗಳಾಗಿದ್ದು, ರಾಜ್ಯದಲ್ಲಿ ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ಯೋಜನೆಗಳ ರಾಜ್ಯ ಸಂಚಾಲಕ ಎಸ್.ಎ.ರಾಮದಾಸ್ ತಿಳಿಸಿದರು.

ವಿಶ್ವಕರ್ಮ ಯೋಜನೆಗೆ ದೇಶದಲ್ಲಿ 63 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, 21 ಲಕ್ಷ ಜನರು ಅರ್ಜಿ ಹಾಕಿದ್ದಾರೆ. ಆಂಧ್ರಪ್ರದೇಶ 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಬೆಳಗಾವಿಯಲ್ಲಿ ಅತಿ ಹೆಚ್ಚು ಅಂದರೆ, 2.21 ಲಕ್ಷ ಜನರು ಅರ್ಜಿ ಸಲ್ಲಿಸಿದ್ದು ಮೊದಲನೇ ಸ್ಥಾನದಲ್ಲಿದೆ. 2ನೇ ಹಂತದಲ್ಲಿ ಯೋಜನೆ ಜಾರಿಯಾದ ಜಿಲ್ಲೆಗಳಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿದ್ದು, 1.29 ಲಕ್ಷ ಜನರು ಅರ್ಜಿ ಹಾಕಿದ್ದಾರೆ. ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ತರಬೇತಿಗೆ ಆಯ್ಕೆಯಾಗಿದ್ದಾರೆ. ಐದು ವರ್ಷಗಳವರೆಗೂ ಕಾರ್ಯಕ್ರಮ ಜಾರಿಯಲ್ಲಿರಲಿದೆ. ಈ ಬಗ್ಗೆ ತಿಳಿಸಲು ಫೆ.1ರಿಂದ 15ರವರೆಗೆ ಯಾತ್ರೆ ನಡೆಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net