ಜಿಲ್ಲಾ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಪ್ರಥಮ

manvi fist
ನವ್ಯಾ ನಕ್ಕುಂದಿ
Published on

ಮಾನ್ವಿ: ತಾಲೂಕಿನ ನೀರಮಾನ್ವಿ ಸರ್ಕಾರಿ ಆದರ್ಶ ವಿದ್ಯಾಲಯ (ಆಂಗ್ಲ ಮಾಧ್ಯಮ)ದ 10ನೇ ತರಗತಿಯ ವಿದ್ಯಾರ್ಥಿನಿ ನವ್ಯಾ ಶೇಖರಗೌಡ ನಕ್ಕುಂದಿ ಜಿಲ್ಲಾಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ರಾಯಚೂರಿನ ಯರಮರಸ್‌ನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಕ್ವಾಂಟಮ್ ಯುಗದ ಆರಂಭ, ಸಾಮರ್ಥ್ಯಗಳು ಮತ್ತು ಸವಾಲುಗಳು’ ಕುರಿತ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿ ಸಾಧನೆಗೆ ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕಿ ಪಲ್ಲವಿ ಅವರನ್ನು ಬಿಇಒ ಚಂದ್ರಶೇಖರ ಹಾಗೂ ಅದರ್ಶ ಶಾಲೆಯ ಮುಖ್ಯಶಿಕ್ಷಕ ದೇವಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net