ಕಬಡ್ಡಿ ಪಂದ್ಯಾಟದಲ್ಲಿ ಮೊದಲ ಬಹುಮಾನ

Kabaddi-1
Published on

ಕಡಬ: ಫ್ರೆಂಡ್ಸ್ ಅಂತರಗುತ್ತು ಟ್ರಸ್ಟ್, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ವತಿಯಿಂದ ಹೊನಲು ಬೆಳಕಿನ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ ಫ್ರೆಂಡ್ಸ್ ಟ್ರೋಪಿ- 2024ರ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು.

ತಂಡದ ಮಹಾಂತೇಶ್ ಬೆಸ್ಟ್ ರೈಡರ್ ಹಾಗೂ ಸಂದೀಪ್ ಪೋಲ್ ಬೆಸ್ಟ್ ಡಿಪೆಂಡರ್ ಪ್ರಶಸ್ತಿ ಪಡೆದುಕೊಂಡರು. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ,, ಜಸ್ವಂತ್ ಹಾಗೂ ಮಂಜುನಾಥ್ ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ, ಮುಖ್ಯಶಿಕ್ಷಕ ಸತೀಶ್ ಭಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net