ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ

nima
Published on

ಮಡಿಕೇರಿ: ಕೊಡಗು ಜಿಲ್ಲೆಯ ನಿಮಾ ೨೦೨೨-೨೪ ಸಾಲಿನಲ್ಲಿ ತೋರಿದ ಸರ್ವಾಂಗೀಣ ಚಟುವಟಿಕೆಗಳಿಗೆ ರಾಜ್ಯದ ೩೪ ಶಾಖೆಗಳ ಪೈಕಿ ಪ್ರಥಮ ಸ್ಥಾನವನ್ನು ಪಡೆದ ಹಿರಿಮೆಗೆ ಪಾತ್ರವಾಯಿತು.

ರಾಣಿಬೆನ್ನೂರುನಲ್ಲಿ ನಡೆದ ಎನ್.ಐ.ಎಂ.ಎ ರಾಜ್ಯ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲೆಯ ನಿಮಾ, ಪ್ರಥಮ ಸ್ಥಾನ ಪಡೆದುಕೊಂಡಿರುವ ಅಧಿಕೃತ ಘೋಷಣೆ ಮಾಡಲಾಯಿತು.

ಕೊಡಗು ಜಿಲ್ಲೆಯಿಂದ ರಾಜ್ಯ ಪ್ರತಿನಿಧಿಗಳಾದ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಶ್ಯಾಮ ಪ್ರಸಾದ್.ಪಿ.ಎಸ್ ಹಾಗೂ ಕೊಡಗು ಜಿಲ್ಲಾ ಅಧ್ಯಕ್ಷ ರಾಜಾರಾಮ.ಎ.ಆರ್ ಜಿಲ್ಲೆಯ ಪರವಾಗಿ ಪ್ರಶಸ್ತಿ ಪಡೆದುಕೊಂಡರು. ಕೊಡಗು ಜಿಲ್ಲೆಯ ನೀಮಾ ಮಹಿಳಾ ಘಟಕ ಕೂಡ ಮಹಿಳಾ ವಿಭಾಗದಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತು.

೨೫ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಇರುವ ಕೊಡಗು ನೀಮಾ ಈ ವರ್ಷದಲ್ಲಿ ಸಾರ್ವಜನಿಕರಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ನಿಮಾ ಕೊಡಗು ಘಟಕದ ಅಧ್ಯಕ್ಷ ಡಾ.ರಾಜಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net