ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರಥಮ ಪ್ರಾಶಸ್ತ್ಯ

8Savadatti1
Published on

ಸವದತ್ತಿ: ಬಹುದಿನಗಳ ಬೇಡಿಕೆಯಾದ ನೂತನ ಪ್ರವಾಸಿ ಮಂದಿರ ಹಾಗೂ ಅಲಂಕಾರಿಕ ದೀಪಗಳ ಅಳವಡಿಕೆ ಪಟ್ಟಣದ ಸೊಬಗು ಹೆಚ್ಚಿಸಿದೆ. ಕ್ಷೇತ್ರದ ಬೆಳವಣಿಗೆ ಕ್ರಮ ಕೈಗೊಳ್ಳುವ ಶಾಸಕರಿಗೆ ಜನರ ಬೆಂಬಲ ಅಗತ್ಯ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸಮೀಪದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರವಾಸಿ ಮಂದಿರ ಮತ್ತು ಪಟ್ಟಣದಲ್ಲಿ ಅಳವಡಿಸಿದ ಅಲಂಕಾರಿಕ ದೀಪ ಉದ್ಘಾಟಿಸಿ ಮಾತನಾಡಿ, ಶಾಸಕ ವಿಶ್ವಾಸವೈದ್ಯ ಕ್ಷೇತ್ರದ ಅಭಿವೃದ್ಧಿ ಕಳಕಳಿ ಹೊಂದಿದ್ದಾರೆ. ಬಜೆಟ್‌ನಲ್ಲಿ ಯಲ್ಲಮ್ಮ ದೇವಸ್ಥಾನಕ್ಕೆ 200 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ ಎಂದರು. ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಸುಮಾರು 150 ಕೋಟಿ ರೂ. ಅನುದಾನ ಮಂಜೂರುಗೊಳಿದ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಮೂಲ ಸೌಕರ್ಯಕ್ಕಾಗಿ ಸಹಕರಿಸಿದ್ದಾರೆ ಎಂದರು.

ಮಾಜಿ ಶಾಸಕ ಆರ್.ವಿ.ಪಾಟೀಲ, ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ, ತಾಪಂ ಇಒ ಆನಂದ ಬಡಕುಂದ್ರಿ, ಪುರಸಭೆ ಅಧ್ಯಕ್ಷೆ ಚಿನ್ನವ್ವ ಹುಚ್ಚಣ್ಣವರ, ಟಿಎಪಿಸಿಎಂಎಸ್ ಅಧ್ಯಕ್ಷ ರವೀಂದ್ರ ಯಲಿಗಾರ, ಎಪಿಎಂಸಿ ಚಂದ್ರು ಜಂಬ್ರಿ, ಲೋಕೋಪಯೋಗಿ ಎಇಇ ವಿಜಯ ಸಂಗಪ್ಪಗೋಳ, ಪುರಸಭೆ ಮುಖ್ಯಾಧಿಕಾರಿ ಸಂಗನಬಸಯ್ಯ ಗದಗಿಮಠ, ಬಸವರಾಜ ಪ್ರಭುನವರ, ಮನೋಹರ ಶೆಟ್ಟರ್, ರಾಜಶೇಖರ ಕಾರದಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net