

ಬೆಳ್ತಂಗಡಿ: ಜೀವನದಲ್ಲಿ ಉತ್ತಮ ಗುರಿ ಹೊಂದಿ ಶಿಸ್ತುಬದ್ಧವಾಗಿ ಮುನ್ನಡೆದಾಗ ಯಶಸ್ಸು ಪಡೆಯಬಹುದು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ಹೇಳಿದರು.
ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಯ ಪಾಲನೆಗೆ ಆದ್ಯತೆ ಕೊಟ್ಟು, ಆಸಕ್ತಿಯಿಂದ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು ಎಂದರು.
ಕಾಲೇಜಿನ ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್, ಕಾಲೇಜಿನ ನೀತಿ-ನಿಯಮಗಳ ಮಾಹಿತಿ ನೀಡಿದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರ್ಷಿತ್ ಕುಮಾರ್ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆಯ ಮಹತ್ವದ ಕುರಿತು ಮಾಹಿತಿ ನೀಡಿದರು.
ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ, ಡಿ.ಯದುಪತಿ ಗೌಡ ಸ್ವಾಗತಿಸಿದರು. ಉಪನ್ಯಾಸಕ ಸುಧೀರ್ ಕೆ.ಎನ್ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಅನುರಾಧ ಕೆ.ರಾವ್ ಮತ್ತು ಬೆಳಿಯಪ್ಪ ಕೆ. ಕಾರ್ಯಕ್ರಮ ನಿರೂಪಿಸಿದರು.