

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ಗೆ 2023ನೇ ಸಾಲಿನ ಕೇಂದ್ರ ಮೀನುಗಾರಿಕಾ ಇರ್ಲಾಯ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ ವತಿಯಿಂದ ಮೀನುಗಾರಿಕಾ ಸಹಕಾರಿ ಸಂ ವಿಭಾಗದಲ್ಲಿ ರಾಷ್ಟ್ರೀಯ ಅತ್ಯುತ್ತಮ ಮೀನುಗಾರಿಕಾ ಸಹಕಾರಿ ಸಂಸ್ಥೆ ಪ್ರಶಸ್ತಿ ಲಭಿಸಿದೆ.
ಅಹಮ್ಮದಾಬಾದ್ನಲ್ಲಿ ವಿಶ್ವ ಮೀನುಗಾರಿಕಾ ದಿನಾಚರಣೆ ನಿಮಿತ್ತ ಮಂಗಳವಾರ ಆಯೋಜಿಸಿದ್ದ ಗ್ಲೋಬಲ್ ಫಿಷರೀಸ್ ಕಾನ್ಫರೆನ್ಸ್ ಇಂಡಿಯಾ ಸಮಾರಂಭದಲ್ಲಿ ದ.ಕ., ಉಡುಪಿ ಮೀನು ಮಾರಾಟ ಫೆಡರೇಷನ್ನ ಅಧ್ಯಕ್ಷರೂ ಆದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕೇಂದ್ರ ಮೀನುಗಾರಿಕೆ, ಪಶುಸಂಗೋಪನಾ ಖಾತೆ ಸಚಿವ ಪಷೋರ್ತ್ತಮ್ ರೂಪಾಲ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಸಮಾಜಮುಖಿ ಕಾರ್ಯ:
ದ.ಕ. ಮೀನು ಮಾರಾಟ ಫೆಡರೇಷನ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ 85 ಸಾವಿರ ಸದಸ್ಯರು ಹಾಗೂ 73 ಸದಸ್ಯ ಸಹಕಾರಿ ಸಂಸ್ಥೆಗಳನ್ನು ಒಳಗೊಂಡಿದೆ. ಸಂಸ್ಥೆಯ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನ, ಸದಸ್ಯರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ, ಆರೋಗ್ಯ ವಿಮೆ, ಮೀನುಗಾರಿಕಾ ಚಟುವಟಿಕೆಗಳಿಗೆ ಪ್ರೋತ್ಸಾಹ, ಮತ್ಸಮೇಳ ಆಯೋಜನೆ ಮೂಲಕ ಮೀನುಗಾರಿಕಾ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುತ್ತಿದೆ. ೆಡರೇಷನ್ನ ಸಮಾಜಮುಖಿ ಕಾರ್ಯಕ್ರಮಗಳನ್ನು ಗುರುತಿಸಿ ಕೇಂದ್ರ ಸರ್ಕಾರ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ದಕ್ಷಿಣ ಕನ್ನಡ&ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅತ್ಯುತ್ತಮ ಕಾರ್ಯ ಚಟುವಟಿಕೆಗಳಿಗಾಗಿ 2015ರಲ್ಲಿ ಅತ್ಯುತ್ತಮ ಮೀನುಗಾರ ಸಹಕಾರಿ ಸಂ ರಾಷ್ಟ್ರ ಪ್ರಶಸ್ತಿ, 2020ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಮೀನು ಮಾರಾಟ ಮಹಾಮಂಡಳ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿ ಗಳಿಸಿದೆ.
ಸಮಾರಂಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಆರ್.ಪಟೇಲ್, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕಾ ಖಾತೆ ರಾಜ್ಯ ಸಚಿವ ಎಲ್.ಮುರುಗನ್, ಡಾ. ಸಂಜೀವ್ ಬಲ್ಯಾನ್, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.