ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ ಪರಿಣಾಮಕಾರಿ ಅನುಷ್ಠಾನ

udp-17-yashpal
Published on

ಉಡುಪಿ: ಕರಾವಳಿ ಜಿಲ್ಲೆಯ ಮೀನುಗಾರರ ಸಮಸ್ಯೆ ಬೇಡಿಕೆಗಳಿಗೆ ಹಲವು ದಶಕಗಳಿಂದ ಸ್ಪಂದಿಸಿ ಮೀನುಗಾರರ ಸಮಸ್ಯೆಗಳಿಗೆ ಧ್ವನಿಯಾಗಿ ಫೆಡರೇಷನ್​ ಕಾರ್ಯನಿರ್ವಹಿಸುತ್ತಿದ್ದು, ಮೀನುಗಾರರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಮತ್ಸ್ಯ ಸಂಪದ ಯೋಜನೆಯನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದು ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್​ ಅಧ್ಯಕ್ಷ ಹಾಗೂ ಶಾಸಕ ಯಶ್​ಪಾಲ್​ ಎ. ಸುವರ್ಣ ಹೇಳಿದರು.

ಮಂಗಳವಾರ ಎಮ್ಮೆಕೆರೆ ಪಾಂಡೇಶ್ವರದ ರಮಾ ಲಕ್ಷ್ಮಿನಾರಾಯಣ ಸಭಾಭವನದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ 2023-&24ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಫೆಡರೇಶನ್​ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ 25 ಲಕ್ಷ ಪ್ರತಿಭಾ ಪುರಸ್ಕಾರ, ವರದಿ ಸಾಲಿನಲ್ಲಿ ಸಂಸ್ಥೆಯೊಂದಿಗೆ ವ್ಯವಹರಿಸುವ ಸದಸ್ಯ ಗ್ರಾಹಕರಿಗೆ ರೂ. 4 ಕೋಟಿ ಪ್ರೋತ್ಸಾಹಕ ಉಡುಗೊರೆ, ದೇಣಿಗೆ ಮತ್ತು ಬಡ ರೋಗಿಗಳಿಗೆ ವೈದ್ಯಕಿಯ ಚಿಕಿತ್ಸೆಗಾಗಿ ಸುಮಾರು ರೂ. 20 ಲಕ್ಷ ಆರೋಗ್ಯನಿಧಿ ನೀಡಲಾಗಿದೆ. ಕೆಲವೊಂದು ಆಯ್ದ ಕೇಂದ್ರಗಳಲ್ಲಿ ಫೆಡರೇಶನ್​ ವತಿಯಿಂದ ಮತ್ಸ$ಕ್ಯಾಂಟಿನ್​ ಆರಂಭಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಕಾಯೋರ್ನ್ಮುಖವಾಗಿದೆ. ಫೆಡರೇಶನ್​ ವತಿಯಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಕಾರದಿಂದ ಮಂಗಳೂರು ನಗರದ ಕೇಂದ್ರ ಭಾಗ ಊರ್ವ ಸ್ಟೋರ್​ ನಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಸುಸಜ್ಜಿತ ಮತ್ಸ$ಸಂಪದ ನೂತನ ಪ್ರಧಾನ ಕಚೇರಿ ಕಟ್ಟಡ ಹಾಗೂ ಸಮುದಾಯ ಭವನದ ಕಾಮಗಾರಿ ಪ್ರಗತಿಯಲಿದೆ ಎಂದರು.
ಮತ್ಸಾ$ಶ್ರಯ ವಸತಿ ಸಹಾಯಧನ ಏರಿಕೆ, ಅಂಬಿಗರ ಚೌಡಯ್ಯ ನಿಗಮದ ವಿದ್ಯಾರ್ಥಿ ವೇತನ, ಮೀನುಗಾರ ಮಹಿಳೆಯರ ಶೂನ್ಯ ಬಡ್ಡಿದರ ಸಾಲ ಸಹಿತ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಫೆಡರೇಶನ್​ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಮಹಾಸಭೆಯಲ್ಲಿ ರಾಷ್ಟ್ರಮಟ್ಟದ ಅತ್ಯುತ್ತಮ ಮೀನುಗಾರಿಕಾ ಸಹಕಾರಿ ಸಂಘ ಪ್ರಶಸ್ತಿಗೆ ಭಾಜನರಾದ ಮಲ್ಪೆ ಯಾಂತ್ರಿಕ ಟ್ರಾಲ್​ ದೋಣಿ ಮೀನುಗಾರರ ಪ್ರಾ. ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್​, ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಬಿ. ಮಂಜುನಾಥ ಕುಂದರ್​ ಹಾಗೂ ಆರ್ಯಭಟ ಪ್ರಶಸ್ತಿ ಪುರಸತ ಸಾಹಿತಿ ಯೋಗೀಶ್​ ಕಾಂಚನ್​ ಅವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಫೆಡರೇಶನಿನ ಉಪಾಧ್ಯಕ್ಷ ದೇವಪ್ಪ ಕಾಂಚನ್​, ಸಹಕಾರಿ ಸಂಘಗಳ ಉಪನಿಬಂಧಕಿ ಲಾವಣ್ಯ, ಮಿನುಗಾರಿಕಾ ಉಪನಿರ್ದೇಶಕ ದಿಲೀಪ್​, ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ದರ್ಶನ್​ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net