ಜು.21ರಂದು ಪಿಲಿಕುಳದಲ್ಲಿ ಮೀನು ಉತ್ಸವ

trout-lal-bazaar-gangtok
Published on


ಮಂಗಳೂರು : ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಲೇಕ್ ಗಾರ್ಡನ್‌ನಲ್ಲಿ ಜು. 21ರಂದು ಮೀನುಗಾರಿಕೆ ಇಲಾಖೆ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಮೀನು ಉತ್ಸವ ಕಾರ್ಯಕ್ರಮ ನಡೆಯಲಿದೆ.
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕೆರೆಯಲ್ಲಿ ಬೆಳೆಸಿದ ರೋಹು, ಕಾಟ್ಲಾ ಮೀನುಗಳನ್ನು ಹಿಡಿದು ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತದೆ. ಮೇಳದಲ್ಲಿ ಮೀನುಗಾರಿಕಾ ಇಲಾಖೆಯ ವತಿಯಿಂದ ಸಮುದ್ರದ ತಾಜಾ ಮೀನುಗಳು ಮತ್ತು ಅವುಗಳ ಖಾದ್ಯಗಳ ಮಾರಾಟ ವ್ಯವಸ್ಥೆಯನ್ನು ಕೆರೆಯ ದಂಡೆಯಲ್ಲಿ ಏರ್ಪಡಿಸಲಾಗಿದೆ. ಮೀನುಗಳ ಮಾರಾಟ ಪ್ರಕ್ರಿಯೆ ಬೆಳಗ್ಗೆ 8ಕ್ಕೆ ಪ್ರಾರಂಭವಾಗಲಿದ್ದು, ಮೀನು ಲಭ್ಯವಿರುವ ತನಕ ಮುಂದುವರಿಯಲಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net