ಮೀನು ಹಿಡಿಯಲು ಹಾಕಿದ್ದ ಬಲೆಗೆ ಸಿಲುಕಿ ಮೀನುಗಾರ ಸಾವು

drowning
Published on

ಪಡುಬಿದ್ರಿ: ಕಾಪು ಲೈಟ್ ಹೌಸ್ ಬಳಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಬಲೆಗೆ ಸಿಲುಕಿ ಸೋಮವಾರ ಮೃತಪಟ್ಟಿದ್ದಾರೆ.

ಸೋಮವಾರ ಬೆಳಗ್ಗೆ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಅವರು, ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆಯೇ ಬಲೆಯೊಳಗೆ ಸಿಲುಕಿ, ಸಮುದ್ರಕ್ಕೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ. ಕಾಸ್ಮರ್ ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯ ಮೀನುಗಾರರು ತಕ್ಷಣ ಅವರ ನೆರವಿಗೆ ಧಾವಿಸಿದರು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಕಾಪು ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net