ಮೀನುಗಾರಿಕಾ ಡಿಸೇಲ್ ಸರಬರಾಜು ಅಡೆತಡೆ ನಿವಾರಣೆಗೆ ಸಚಿವರಿಗೆ ಮನವಿ

udp-21-yashpal
Published on

ಉಡುಪಿ: ಮುಂದಿನ ಮೀನುಗಾರಿಕೆ ಋತು ಆರಂಭದಲ್ಲಿ ಬೋಟ್‌ಗಳಿಗೆ ನೀಡಲಾಗುತ್ತಿರುವ ಡಿಸೇಲ್ ಸರಬರಾಜಿನಲ್ಲಿ ಯಾವುದೇ ಅಡೆತಡೆ ನಿವಾರಣೆಗೆ ಕ್ರಮಕೈಗೊಳ್ಳಬೇಕು ಎಂದು ಗುರುವಾರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಕರ್ನಾಟಕ ಕರಾವಳಿ ಮೀನುಗಾರ ಕ್ರಿಯಾ ಸಮಿತಿ ನಿಯೋಗ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದಿಪ್ ಸಿಂಗ್ ಪುರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳು, ಕನ್ಸ್ಯೂಮರ್ ಹಾಗೂ ರಿಟೇಲ್ ಡಿಸೇಲ್ ದರದ ವ್ಯತ್ಯಾಸ, ಬಂಕ್‌ಗಳ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಚರ್ಚಿಸಲಾಯಿತು. ಮೀನುಗಾರರಿಗೆ ಅನುಕೂಲವಾಗುವಂತೆ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಸೂಕ್ತಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ನಿಯೋಗದಲ್ಲಿ ದ.ಕ. ಮೀನು ಮಾರಾಟ ಫೆಡರೇಷನ್‌ನ ಅಧ್ಯಕ್ಷ ಯಶಪಾಲ್ ಸುವರ್ಣ, ಕರ್ನಾಟಕ ಕರಾವಳಿ ಮೀನುಗಾರ ಕ್ರಿಯಾ ಸಮಿತಿಯ ಅಧ್ಯಕ್ಷ ಜಯ. ಸಿ. ಕೋಟ್ಯಾನ್, ಉಪಾಧ್ಯಕ್ಷ ರಾಮಚಂದ್ರ ಕುಂದರ್, ಪ್ರಧಾನ ಕಾರ್ಯದರ್ಶಿ ಕಿಶೋರ್ ಡಿ. ಸುವರ್ಣ, ಕೋಶಾಧಿಕಾರಿ ಸೋಮನಾಥ್ ಕಾಂಚನ್, ಸಲಹೆಗಾರ ಸತೀಶ್ ಕುಂದರ್ ಮಲ್ಪೆ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net