ಜೂ.1 ರಿಂದ ಮೀನುಗಾರಿಕೆ ನಿಷೇಧ

allwyn_060221_fishing
Published on


ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಜೂ.1ರಿಂದ ಜು.31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ಕಾಲ ಮೀನುಗಾರಿಕೆ ನಿಷೇಧಿಸಲಾಗಿದೆ.
ಈ ಅವಧಿಯಲ್ಲಿ ಯಾವುದೇ ಬಲೆ / ಸಾಧನಗಳನ್ನು ಉಪಯೋಗಿಸಿ ಎಲ್ಲ ರೀತಿಯ ಯಾಂತ್ರೀಕೃತ ದೋಣಿಗಳ ಮೂಲಕ /10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ನಿಷೇಧಿಸಲಾಗಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ.
ಮೀನುಗಾರಿಕೆ ನಿಷೇಧಿಸಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುತ್ತಾರೆ. ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಮೀನುಗಾರರು ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net