ಮೇ 25 ರವರೆಗೆ ಮೀನುಗಾರಿಕೆಗೆ ನಿಷೇಧ: ಕರಾವಳಿ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಬಂದರಿನಲ್ಲಿ ಲಂಗರು ಹಾಕಿರುವ ಬೋಟುಗಳು
ಬಂದರಿನಲ್ಲಿ ಲಂಗರು ಹಾಕಿರುವ ಬೋಟುಗಳು
Published on

ಪ್ರಮುಖ ಮುಖ್ಯಾಂಶಗಳು

  • ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಬಲವಾದ ಗಾಳಿ ಹಾಗೂ ಪ್ರತಿಕೂಲ ಹವಾಮಾನ ಉಂಟಾಗುವ ಸಾಧ್ಯತೆ ಇರುವುದರಿಂದ ಮೇ 20 ರಿಂದ ಮೇ 25 ರ ವರೆಗೆ ಕರ್ನಾಟಕ ಕರಾವಳಿಯ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಕೇಂದ್ರ ಗೃಹ ಸಚಿವಾಲಯದ ತುರ್ತು ನಿರ್ವಹಣಾ ನಿಯಂತ್ರಣ ಕೊಠಡಿ ಜಂಟಿ ಮುನ್ನೆಚ್ಚರಿಕೆ ನೀಡಿದೆ.
ಮೇ 20 ರಿಂದ ಮೇ 22 ರ ಅವಧಿಯಲ್ಲಿ ಕರ್ನಾಟಕ, ಕೇರಳ ಕರಾವಳಿ, ಲಕ್ಷದ್ವೀಪ, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಕೆಲವು ಕಡೆ ಇದು 60 ಕಿ.ಮೀ. ವರೆಗೆ ಹೆಚ್ಚಾಗುವ ಸಾಧ್ಯತೆಯಿದೆ. ನೈಋತ್ಯ ಅರಬ್ಬಿ ಸಮುದ್ರ, ವಿಶೇಷವಾಗಿ ಸೋಮಾಲಿಯಾ ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 45 ರಿಂದ 55 ಕಿ.ಮೀ. ಇರಲಿದ್ದು, ಗರಿಷ್ಠ 65 ಕಿ.ಮೀ. ವರೆಗೆ ತಲುಪಬಹುದು.
ಮನ್ನಾರ್ ಕೊಲ್ಲಿ, ನೈಋತ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿ ಹಾಗೂ ಅಂಡಮಾನ್ ಸಮುದ್ರ ಭಾಗದಲ್ಲೂ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಶ್ರೀಲಂಕಾ ಕರಾವಳಿ ಮತ್ತು ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಗಾಳಿಯ ತೀವ್ರತೆ 65 ಕಿ.ಮೀ. ಗಿಂತ ಹೆಚ್ಚಾಗಬಹುದು ಎಂದು ಎಚ್ಚರಿಸಲಾಗಿದೆ.

ತಕ್ಷಣ ಮರಳಲು ಸೂಚನೆ

ಈಗಾಗಲೇ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿರು ವ ಮೀನುಗಾರರು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ತಕ್ಷಣವೇ ಸುರಕ್ಷಿತವಾಗಿ ದಡಕ್ಕೆ ಮರಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಮುನ್ನೆಚ್ಚರಿಕೆಯ ಸಂದೇಶವನ್ನು ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ ಮತ್ತು ತಮಿಳುನಾಡು ಸೇರಿದಂತೆ ದೇಶದ ಎಲ್ಲಾ ಕರಾವಳಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರವಾನಿಸಲಾಗಿದ್ದು, ಅಧಿಕಾರಿಗಳು ಕಟ್ಟುನಿಚ್ಚರ ವಹಿಸುವಂತೆ ಸೂಚಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net