

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ನಾಡಪ್ರಭು ಕೆಂಪೇಗೌಡ ಬಡಾವಣೆ ಹಾಗೂ ಉದ್ದೇಶಿತ ಆರ್ಟೀರಿಯಲ್ ರಸ್ತೆಗೆ (ಎಂಎಆರ್) ಭೂಸ್ವಾಧೀನಪಡಿಸಿಕೊಂಡಿರುವ ಪ್ರದೇಶವನ್ನು ಕಂದಾಯ ನಿವೇಶನದಾರರು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಸುಮಾರು 5 ಎಕರೆ ಜಮೀನನ್ನು ತೆರವುಗೊಳಿಸಿ ತನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಚಲ್ಲಘಟ್ಟ ಗ್ರಾಮದ ಸರ್ವೆ ನಂ.4 ಮತ್ತು 8ರ ಜಮೀನು ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಹಾಗೂ ಉದ್ದೇಶಿತ ಎಂಎಆರ್‌ಗೆ ಭೂಸ್ವಾಧೀನಪಡಿಸಿಕೊಳ್ಳಲಾಗಿತ್ತು. ಈ ಜಾಗದಲ್ಲಿ ಅನಧಿಕೃತವಾಗಿ ಕಂದಾಯ ನಿವೇಶನದಾರರು ಒತ್ತುವರಿ ಮಾಡಿಕೊಂಡು ಕಾಮಗಾರಿಗೆ ಅಡ್ಡಿ ಉಂಟುಮಾಡುತ್ತಿದ್ದರಿಂದ 5 ಎಕರೆ ಜಮೀನನ್ನು ತೆರವುಗೊಳಿಸಿ ಪ್ರಾಧಿಕಾರವು ತನ್ನ ಸುಪರ್ದಿಗೆ ಬುಧವಾರ ತೆಗೆದುಕೊಂಡಿದೆ. ಇದರಿಂದಾಗಿ ಎಂಎಆರ್ ರಸ್ತೆ ನಿರ್ಮಿಸಲು ಎದುರಾಗಿದ್ದು ಕೆಲ ಪ್ರದೇಶದಲ್ಲಿ ಕಾಮಗಾರಿ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯನ್ನು ಪ್ರಾಧಿಕಾರದ ಆರಕ್ಷಕ ಅಧೀಕ್ಷಕ ಕೆ. ನಂಜುಂಡೇಗೌಡ ನೇತೃತ್ವದಲ್ಲಿ ಕೈಗೊಳ್ಳಲಾಯಿತು.